Blog

ಆಲೂರು ವೀರಶೈವ ಮಹಾಸಭಾ ತಾಲೂಕು ಘಟಕದ ಪದಗ್ರಹಣ

ಆಲೂರು: ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಪದಗ್ರಹಣ ಕಾರ್ಯಕ್ರಮವು ಸೆ. 3 ರಂದು ಆಲೂರು ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ  ನಡೆಯಲಿದ್ದು ಕಾರ್ಯಕ್ರಮ ಯಶಸ್ವಿಗೆ ಸಮಾಜದ ಬಾಂಧವರು ಸಹಕರಿಸಬೇಕು ಎಂದು ಸಂಘದ ತಾಲೂಕು ಅಧ್ಯಕ್ಷ ಅಜಿತ್ ಚಿಕ್ಕ ಕಣಗಾಲು ತಿಳಿಸಿದರು.

ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಆಲೂರು ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೆ 3. ರ ಮಂಗಳವಾರ ಮಧ್ಯಾಹ್ನ 3:00ಗೆ ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ನಿರ್ದೇಶಕರುಗಳ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತಾಲೂಕಿನ ಸಂಕ್ಲಾಪುರ ಮಠದ ಪೀಠಾಧ್ಯಕ್ಷರಾದ ಶ್ರೀ ಧರ್ಮರಾಜೇಂದ್ರ ಸ್ವಾಮೀಜಿಗಳು ಹಾಗೂ ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿಗಳು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷರಾಗಿರುವ ನಿವೃತ್ತ ಪೊಲೀಸ್ ಕಮೀಷನರ್ ಶಂಕರ್ ಬಿದರಿ, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯ ಸಿದ್ದೇಶ್ ನಾಗೇಂದ್ರ,  ಚಂದ್ರಕಲಾ, ಹಾಸನ ಜಿಲ್ಲಾಧ್ಯಕ್ಷ ಪರಮೇಶ್, ಮಾಜಿ ಅಧ್ಯಕ್ಷ ಬಿ.ಆರ್ ಗುರುದೇವ್, ಹಾಸನ ತಾಲೂಕು ಅಧ್ಯಕ್ಷ ಶಿವಕುಮಾರ್ ಕಟ್ಟಾಯ, ಬೇಲೂರು ತಾಲೂಕು ಅಧ್ಯಕ್ಷ ಬಸವರಾಜ್, ಅರಕಲಗೂಡು ತಾಲೂಕು ಅಧ್ಯಕ್ಷ ಸುರೇಶ್, ಆಲೂರು ತಾಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರೇಣುಕಾ ಪ್ರಸಾದ್, ಉಪಾಧ್ಯಕ್ಷ ಡಿ.ಎಸ್ ಜಯಣ್ಣ, ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ, ಸಹಕಾರ್ಯದರ್ಶಿ ಡಾ.ಜಯರಾಜ್, ಖಜಾಂಚಿ ಟೀಕರಾಜ್, ವೀರಶೈವ ಹಿರಿಯ ಮುಖಂಡರಾದ ಕಬ್ಬಿನಹಳ್ಳಿ ಜಗದೀಶ್ ಸೇರಿದಂತೆ ಮುಂತಾದವರ ಭಾಗವಹಿಸಲಿದ್ದಾರೆ.  ಅಪಾರ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಆಗಮಿಸಿ ಈ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದು ಈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ನಿರ್ದೇಶಕರುಗಳಾದ ಮಲ್ಲಪ್ಪ ಹಂಚೂರು, ಲೋಹಿತ್ ಆಲೂರು, ತಾಂಡೇಶ್ ಬೆಳ್ಳೂರು, ದರ್ಶನ್ ಕೆರೆಹಳ್ಳಿ ಹಾಜರಿದ್ದರು.

Related posts

ಬೈಕ್ ಅಪಘಾತದಲ್ಲಿ ಮೃತ್ಯು

Bimba Prakashana

ಹೆತ್ತೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಉಪನ್ಯಾಸ

Bimba Prakashana

ಕುನಿಗನ ಹಳ್ಳಿಯಲ್ಲಿ ಕರ ವಸೂಲಿಗಾರ ನಿವೃತ್ತಿ – ಬೀಳ್ಕೊಡುಗೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More