Blog

ಎತ್ತಿನ ಹೊಳೆ ಗೆ ಚಾಲನೆ ನೀಡಿದ ಮುಖ್ಯಮಂತ್ರಿಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌ‌ಸ್‌ನಲ್ಲಿ ಚಾಲನೆ ನೀಡಿದರು

ಕೋಲಾರ, ಚಿಕ್ಕ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷೆ ಯೋಜನೆಗೆ ಬಹುವರ್ಷಗಳ ನಂತರ ಚಾಲನೆ ದೊರೆಯಿತು.


ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೊಡ್ಡನಗರದ ಎತ್ತಿನಹೊಳೆ ಡಿಸಿ -3 ಪಂಪ್ ಹೌಸ್ ನಲ್ಲಿ ಶುಕ್ರವಾರ ಪೂಜೆ ನೆರವೇರಿಸಿದರು.

ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

Related posts

ಮರಳು ಮಾಫಿಯಾ – ತಹಸೀಲ್ದಾರ್ ಪೊಲೀಸ್ ಜಂಟಿ ದಾಳಿ

Bimba Prakashana

ಹರಿ ಹಳ್ಳಿ ಶಾಲಾ ವಿದ್ಯಾರ್ಥಿನಿ ಸಾನಿಕ ಜಿಲ್ಲಾ ಮಟ್ಟಕ್ಕೆ

Bimba Prakashana

ಶೇ 50 ಡಿಸ್ಕೌಂಟ್ ಸೇಲ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More