Blog

ವೀರಶೈವ ಲಿಂಗಾಯತ ಬರೆಸಿ

ಆಲೂರು:  ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಧರ್ಮ ಕಾಲಂನಲ್ಲಿ ಹಿಂದೂ ಎಂದು ಹಾಗೂ ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸುವಂತೆ ತಾಲೂಕು ವೀರಶೈವ-ಲಿಂಗಾಯತ ಸಂಘದ ಅಧ್ಯಕ್ಷ ರೇಣುಕಾ ಪ್ರಸಾದ್ ತಾಲೂಕಿನ ಎಲ್ಲಾ ವೀರಶೈವ-ಲಿಂಗಾಯತ ಸಮುದಾಯದವರಿಗೆ ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು ಬುಧವಾರ ಮಾತನಾಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಅಜಿತ್ ಚಿಕ್ಕಕಣಗಾಲು ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ವೀರಶೈವ ಬಾಂಧವರು ಸ್ಪಷ್ಟ ಮಾಹಿತಿ ನೀಡದಿದ್ದರೆ ಮುಂದಿನ ಪೀಳಿಗೆಗೆ ತೊಂದರೆ ಉಂಟಾಗಲಿದೆ. ಈ ಬಗ್ಗೆ ಎಲ್ಲರೂ ಒಗ್ಗಟ್ಟಿನಿಂದ ಸೂಕ್ತ ನಿರ್ಣಯ ಕೈಗೊಂಡು ಅದನ್ನು ಸಮುದಾಯದ ಜನರಿಗೆ ತಲುಪಿಸಬೇಕು ಎಂದು ಸಲಹೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ವೀರಶೈವ ಸಂಘದ ಉಪಾಧ್ಯಕ್ಷ ಜಯಣ್ಣ, ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ, ಖಜಾಂಚಿ ಟೀಕ್ ರಾಜ್, ನಿರ್ದೇಶಕ ಬಿ.ಎಲ್ ಶಾಂತರಾಜ್, ಜಿಲ್ಲಾ ನಿರ್ದೇಶಕ ಶಾಂತಪ್ಪ ಇದ್ದರು.

Related posts

ಹಾಸನದಲ್ಲಿ ಮನೆ ಕನಸು

Bimba Prakashana

ಕನ್ನಡದ ರಥೋತ್ಸವಕ್ಕೆ ಅದ್ದೂರಿ ಸ್ವಾಗತ

Bimba Prakashana

ಹಿಂದೂ ಜಾಗರಣ ವೇದಿಕೆಯಿಂದ ಸಕಲೇಶಪುರದಲ್ಲಿ ಪ್ರತಿಭಟನೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More