Blog

ಆಲೂರುನಲ್ಲಿ ಕನ್ನಡ ರಾಜ್ಯೋತ್ಸವ

ಅದ್ದೂರಿ ಯಾಗಿ ನಡೆದ 70ನೇ ಕನ್ನಡ ರಾಜ್ಯೋತ್ಸವ…. ಸಿಮೆಂಟ್ ಮಂಜು ಬಾಗಿ

ಆಲೂರು: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಲೂರಿನ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಲ್ಲೂಕು ತಹಸೀಲ್ದಾರ್ ಮಲ್ಲಿಕಾರ್ಜುನ್ ರವರು ಧ್ವಜಾರೊಣ ಮಾಡಿ ಧ್ವಜ ಸಂದೇಶ ನೀಡಿದರು.

ನಂತರ   ಸಕಲೇಶಪುರ ಆಲೂರು ಕಟ್ಟಾಯ  ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಾಗವಹಿಸಿ ಕನ್ನಡ ರಾಜ್ಯೋತ್ಸವದ ಬಗ್ಗೆ  ಉದ್ದೇಶಿಸಿ ಮಾತನಾಡುತ್ತಾ..  ಕನ್ನಡವನ್ನು ಬಳಸುವ ಮೂಲಕ ಕನ್ನಡವನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ, ಸರ್ಕಾರ ಕನ್ನಡ ಶಾಲೆಗಳಿಗೆ ಹೆಚ್ಚು ಅನುದಾನ ನೀಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ  ವಿವಿಧ ಇಲಾಖೆ ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಸರಕಾರಿ ಬಸ್ ಚಾಲಕನಿಗೆ ಥಳಿತ

Bimba Prakashana

ಶನಿವಾರ ಸಂತೆ ಸಮೀಪ ನಿವೇಶನಗಳು

Bimba Prakashana

ವರ್ಧಮಾನ್ ಎಲೆಕ್ಟ್ರಾನಿಕ್ ನಲ್ಲಿ ಆಫರೋ ಆಫರ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More