ಹಾಸನ ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್–2026 ಶುಕ್ರವಾರಸಂತೆಯ
ಶ್ರೀ ಮಂಜುನಾಥೇಶ್ವರ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ.:-
ಹಾಸನ: ಫೆಬ್ರವರಿ 7 ಮತ್ತು 8 ರಂದು ಹಾಸನದಲ್ಲಿ ನಡೆದ ಹಾಸನ ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್–2026ರಲ್ಲಿ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಈ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶಾಲೆಯ ಒಟ್ಟು 16 ವಿದ್ಯಾರ್ಥಿಗಳು ಭಾಗವಹಿಸಿ, ಕಥಾ ಹಾಗೂ ಕುಮಿತೆ ವಿಭಾಗಗಳಲ್ಲಿ ಒಟ್ಟು 28 ಬಹುಮಾನಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಕಥಾ ವಿಭಾಗದಲ್ಲಿ ವಿದ್ಯಾರ್ಥಿಗಳು 4 ಪ್ರಥಮ, 4 ದ್ವಿತೀಯ ಹಾಗೂ 8 ತೃತೀಯ ಬಹುಮಾನಗಳನ್ನು ಗಳಿಸಿದರು.
ಕುಮಿತೆ ವಿಭಾಗದಲ್ಲಿ 3 ಪ್ರಥಮ, 2 ದ್ವಿತೀಯ ಹಾಗೂ 7 ತೃತೀಯ ಬಹುಮಾನಗಳನ್ನು ಪಡೆದು ಶ್ಲಾಘನೀಯ ಪ್ರದರ್ಶನ ನೀಡಿದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಕರಾಟೆ ತರಬೇತುದಾರರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಕಠಿಣ ಅಭ್ಯಾಸ, ಶಿಸ್ತು ಹಾಗೂ ಮಾರ್ಗದರ್ಶನವೇ ಈ ಯಶಸ್ಸಿಗೆ ಕಾರಣ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಾಧನೆಯೊಂದಿಗೆ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆ ಕ್ರೀಡಾ ಕ್ಷೇತ್ರದಲ್ಲಿಯೂ ತನ್ನ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
previous post
next post
