Blog

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರಸಿದ್ಧಿ ವಿನಾಯಕ ದೇವಸ್ಥಾನದ ಪ್ರತಿಷ್ಠ ವರ್ಧಂತಿ



ಸಕಲೇಶಪುರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ನಿರ್ಮಿಸಲಾಗಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ಒಂಬತ್ತನೇ ವರ್ಷದ ಪ್ರತಿಷ್ಠಾಪನಾ ವರ್ಧಂತಿ ಉತ್ಸವವನ್ನು ಡಿ.ವೈ.ಎಸ್.ಪಿ. ಮಾಲತೇಶ್ ಅವರ ಮಾರ್ಗದರ್ಶನದಲ್ಲಿ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.

ನಗರ ಠಾಣೆ ಹಾಗೂ ಗ್ರಾಮಾಂತರ ಠಾಣೆಯ ಎಲ್ಲಾ ಸಿಬ್ಬಂದಿಗಳ ಸಹಕಾರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮಹಾಗಣಪತಿ ಪೂಜೆ, ಹೋಮ-ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಮೂರು ದಿನಗಳ ಕಾಲ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಬೆಜ್ಜವಳ್ಳಿಯಲ್ಲಿ ಸ್ಥಾಪಿತವಾಗಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಂಸ್ಥಾಪಕರು, ಧರ್ಮಗುರುಗಳಾದ ಹಾಗೂ ದೂರದರ್ಶನ ಕಾರ್ಯಕ್ರಮಗಳಲ್ಲಿ ಆಯುರ್ವೇದ ಮತ್ತು ಸನಾತನ ಧರ್ಮದ ಬಗ್ಗೆ ಉಪನ್ಯಾಸ ನೀಡುವ ಶ್ರೀ ಸಂತೋಷ್ ಗುರೂಜಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಭಕ್ತರಿಗೆ ಪ್ರತಿದಿನ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು. ಈ ಎಲ್ಲಾ ಪೂಜಾ ವಿಧಿ ವಿಧಾನಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ಗಂಗಾಧರ ಭಟ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿ. ಮಾಲತೇಶ್, ಸರ್ಕಲ್ ಇನ್ಸ್ಪೆಕ್ಟರ್‌ಗಳಾದ ಬಸವನಗೌಡ ಪಾಟೀಲ್ ಹಾಗೂ ವನರಾಜು, ಸಬ್‌ ಇನ್ಸ್ಪೆಕ್ಟರ್‌ಗಳಾದ ಮಹೇಶ್ ಮತ್ತು ಪ್ರಸನ್ನ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು.

Related posts

ಅರೇ ಹಳ್ಳಿ ಬಳಿ ಇನ್ನೋವಾ ಕಾರು ಪಲ್ಟಿ

Bimba Prakashana

ಬೈಕ್ ಅಪಘಾತದಲ್ಲಿ ಮೃತ್ಯು

Bimba Prakashana

ಅಂಗನವಾಡಿ ಶಿಕ್ಷಕಿ ತುಳಸಿ ನಿವೃತ್ತಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More