Blog

ಮದುವೆ ಮುಗಿಸಿ ಬರುತ್ತಿದ್ದವರಿಗೆ ಅಪಘಾತ – 3 ಮೃತ್ಯು

KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ  ಸಂಭವಿಸಿದ್ದು,  ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ  ಶಿರಾಡಿಘಾಟ್ನ ಗುಂಡ್ಯ ಸಮೀಪ ನಡೆದಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ನಾಲ್ವರು ಒಂದೇ ಕಾರಿನಲ್ಲಿ ಸಕಲೇಶಪುರದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಉಜಿರೆ ಕಡೆ ಹೋಗುತ್ತಿದ್ದರು. ಇನ್ನು ಕೆಎಸ್ಆರ್ಟಿಸಿ ರಾಜಹಂಸ ಬಸ್ ಮಂಗಳೂರು ಕಡೆಯಿಂದ ಬಂದಿದ್ದು, ಶಿರಾಡಿಘಾಟ್ನ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರು ಪ್ರಯಾಣಿಸುತ್ತದ್ದ ಸ್ವೀಫ್ಟ್ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿ ಹೊರಟಿರುವ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಈ ದುರ್ಘಟನೆ ಸಂಭವಿಸಿದೆ. ಇನ್ನು ಕಾರಿನಲ್ಲಿದ್ದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಉಜಿರೆ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಹಾನ್ ಬಾಳ್ ಚಿಕ್ಕಿ 5 ನೇ ದಿನದ ವಿಶೇಷ

Bimba Prakashana

ಸಕಲೇಶಪುರಕ್ಕೆ ನೂತನ ಉಪ ವಿಭಾಗ ಅಧಿಕಾರಿಗಳು

Bimba Prakashana

ಬಿಜೆಪಿಯಲ್ಲಿ ಬಾಗೆ ಗೋಪಿನಾಥ್ ಗೆ ಸ್ಥಾನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More