Blog

ಪಟ್ಲ ಬೆಟ್ಟಕ್ಕೆ ಪ್ರವೇಶ ತಾತ್ಕಾಲಿಕ ನಿಷೇಧ

ಪಟ್ಲ ಬೆಟ್ಟಕ್ಕೆ ಪ್ರವೇಶ ತಾತ್ಕಾಲಿಕ ನಿಷೇಧ : ಅರಣ್ಯ ಇಲಾಖೆ ಪ್ರಕಟಣೆ

ಸಕಲೇಶಪುರ :- ತಾಲ್ಲೂಕಿನ ಪ್ರಸಿದ್ಧ ಟ್ರೆಕ್ಕಿಂಗ್ ತಾಣವಾದ ಪಟ್ಲ ಬೆಟ್ಟದಲ್ಲಿ ಕಳೆದ ನಾಲ್ಕು ದಿನಗಳಿಂದ ಸುಮಾರು 10 ಕಾಡಾನೆಗಳ ಗುಂಪು ಬೀಡು ಬಿಟ್ಟಿರುವ ಹಿನ್ನೆಲೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಾತ್ಕಾಲಿಕವಾಗಿ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಯಸಳೂರು ವಲಯಾರಣ್ಯಾಧಿಕಾರಿಗಳು ಪ್ರಕಟಣೆ ನೀಡಿದ್ದಾರೆ.

ಕಾಡಾನೆಗಳ ಸಂಚರಣೆ ಹೆಚ್ಚಿರುವುದರಿಂದ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ಟ್ರೆಕ್ಕಿಂಗ್ ಪ್ರಿಯರು ಇಲಾಖೆಗೆ ಸಹಕರಿಸಿ ನಿಷೇಧಾವಧಿಯಲ್ಲಿ ಪಟ್ಲ ಬೆಟ್ಟದ ಕಡೆಗೆ ತೆರಳಬಾರದು ಎಂದು ಮನವಿ ಮಾಡಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿ ನಿರಂತರ ನಿಗಾವಹಿಸಿದ್ದು, ಪರಿಸ್ಥಿತಿ ಸಾಮಾನ್ಯಗೊಂಡ ಬಳಿಕ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ತಿಳಿಸಲಾಗಿದೆ.

Related posts

ಸಕಲೇಶಪುರ ನಗರ ಠಾಣೆಯಲ್ಲಿ ಸಮಸ್ಯೆಗಳ ಬಗ್ಗೆ ಸಭೆ

Bimba Prakashana

ತಹಸೀಲ್ದಾರ್ ಇಲ್ಲದೆ ಪೋಸ್ಟ್ ಮಾರ್ಟಮ್ ವಿಳಂಬ

Bimba Prakashana

ಬಾಗೆ ಶಾಲೆಯಲ್ಲಿ ಸರಣಿ ಕಳ್ಳತನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More