Blog

ಕಾರ್ಜುವಳ್ಳಿ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ವಿಶ್ವರತ್ನ ಕ್ರಿಕೆಟ್ ಪಂದ್ಯಾಟ

ಡಾ. ಬಿ.ಆರ್. ಅಂಬೇಡ್ಕರ್ ವಿಶ್ವ ಕಂಡ ಶ್ರೇಷ್ಠ ಸಮಾಜ ಸುಧಾರಕ ಮತ್ತು ಮಹಾ ಮಾನವತಾವಾದಿ. ಇಂತಹ ಮಹಾನ್ ವ್ಯಕ್ತಿಯ ಹೆಸರಿನಲ್ಲಿ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಿರುವುದು  ಹೆಮ್ಮೆಯ  ವಿಚಾರ ಎಂದು ಆಲೂರು ಸಕಲೇಶಪುರ ಕ್ಷೇತ್ರದ ಜನಪ್ರಿಯ ಶಾಸಕರಾದ ಸಿಮೆಂಟ್ ಮಂಜು  ಹೇಳಿದರು.

ತಾಲೂಕಿನ ಪಾಳ್ಯ ಹೋಬಳಿ ಕಾರ್ಜುವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ‘ಡಾ. ಬಿ.ಆರ್. ಅಂಬೇಡ್ಕರ್ ವಿಶ್ವರತ್ನ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ಸಮಾನತೆಯ ಹರಿಕಾರರಾಗಿದ್ದು, ಕಾರರಾಗಿದು, ದೀನ ದಲಿತರ ಏಳಿಗೆಗಾಗಿ ತಮ್ಮ ಜೀವನವನ್ನೇ ಅರ್ಪಿಸಿದ್ದಾರೆ. ಅವರ ಆದರ್ಶಗಳು ಎಲ್ಲ ವರ್ಗದ ಜನತೆಗೆ ಮಾದರಿಯಾಗಿವೆ ಎಂದು ಹೇಳಿದರು. ಯುವಕರು ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಂಡರೆ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.



ಆಲೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ನವೀನ್ ಮಾತನಾಡಿ, ಕ್ರೀಡೆಗಳ ಮಹತ್ವವನ್ನು ಅರಿತು ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ಕ್ರೀಡಾಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಾತನಾಡಿದ್ದಲ್ಲದೆ ನಮ್ಮ ದೇಶದ ಕ್ರಿಕೆಟ್ ತಂಡಕ್ಕೆ ತಾವುಗಳು ಆಯ್ಕೆಯಾಗಿ ನಮ್ಮ ತಾಲೂಕಿಗೆ ಕೀರ್ತಿ ತರಬೇಕೆಂದು  ಕರೆ ನೀಡಿದರು.
ಹಲವು ವರ್ಷಗಳಿಂದ ಶಿಕ್ಷಕರಾಗಿ ಸೇವೆ ಮಾಡಿದ ಚಂದ್ರಶೇಖರ್ ಅವರನ್ನು ಕಾರ್ಜುವಳ್ಳಿ ಗ್ರಾಮದ ಸುತ್ತಮುತ್ತಲಿನ ಶಿಕ್ಷಕ ವೃಂದ ಅವರೆಲ್ಲ ಸೇರಿ ಗುರುವಂದನೆ ಮಾಡಿ ಅವರಿಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ನವೀನ್ ಬೈರಾಪುರ . ಶಿಕ್ಷಕರಾದ ಚಂದ್ರಶೇಖರ  ಕಾರ್ಜುವಳ್ಳಿ, ತಾಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರವಿ ನಿಲುವಾಗಿಲು ಸೇರಿದಂತೆ ಗ್ರಾಮಸ್ಥರಾದ ಸೋಮಶೇಖರ, ಗುರಪ್ಪ, ಲಿಂಗರಾಜು,  ಮತ್ತು ಇತರರು ಉಪಸ್ಥಿತರಿದ್ದರು.

Related posts

ಬೇಲೂರು ಇಬ್ಬಿಡು ಗ್ರಾಮದಲ್ಲಿ ಜಾತ್ರಾ ಮಹೋತ್ಸವ

Bimba Prakashana

ಮರ್ಕ ಹಳ್ಳಿಯಲ್ಲಿ ಮನೆ ಮೇಲೆ ದಾಳಿ ಮಾಡಿದ ಕಾಡಾನೆ

Bimba Prakashana

ಬಾಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More