ಆಹೋರಾತ್ರಿ ಹೋರಾಟಕ್ಕೆ ಮುಂದುವರೆಸಿದ ಕರವೇ ಕಾರ್ಯಕರ್ತರು.
( ಪ್ರತಿಭಟನಾ ಸ್ಥಳಕ್ಕೆ ರಾತ್ರಿ 7 ಗಂಟೆಗೆ ಸರ್ಕಲ್ ಇನ್ಸ್ಪೆಕ್ಟರ್ ವನರಾಜು ಭೇಟಿ)
ಸಕಲೇಶಪುರ: ಬಾಗೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಅಮಾನತು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣದ ಕಾರ್ಯಕರ್ತರು ತಾಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು.
ಬೆಳಿಗ್ಗೆಯಿಂದ ಸಂಜೆವರೆಗೆ ಪ್ರತಿಭಟನೆ ನಡೆದರೂ ಯಾವುದೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸದಿರುವುದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಭೇಟಿ ನೀಡದ ಹಿನ್ನೆಲೆ, ಪ್ರತಿಭಟನಾಕಾರರು ಆಹೋರಾತ್ರಿ ಅನಿರ್ದಿಷ್ಟಾವಧಿ ಹೋರಾಟ ಮುಂದುವರಿಸಲು ತೀರ್ಮಾನಿಸಿದರು.
ಇನ್ನೂ ರಾತ್ರಿ ವೇಳೆ ಪರಿಸ್ಥಿತಿಯನ್ನು ಪರಿಶೀಲಿಸಲು ಸರ್ಕಲ್ ಇನ್ಸ್ಪೆಕ್ಟರ್ ವನರಾಜು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒ ವಿರುದ್ಧ ತಕ್ಷಣ ಅಮಾನತು ಕ್ರಮ ಕೈಗೊಳ್ಳಬೇಕು ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.
ಕರವೇ ಪ್ರತಿಭಟನೆಗೆ ಅಧಿಕಾರಿಗಳ ನಿರ್ಲಕ್ಷ್ಯ: ಪಿಡಿಓ ಅಮಾನತ್ತಿಗೆ ಒತ್ತಾಯಿಸಿ ಆಹೋರಾತ್ರಿ ಧರಣಿ.
ಸಕಲೇಶಪುರ: ಬಾಗೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಅಮಾನತು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣದ ಕಾರ್ಯಕರ್ತರು ತಾಲೂಕು ಪಂಚಾಯಿತಿ ಕಚೇರಿ ಎದುರು ನಿರ್ದಿಷ್ಟ ಅವಧಿಯ ಮುಷ್ಕರ ಹಮ್ಮಿಕೊಂಡು ಬಳಿಕ ಆಹೋರಾತ್ರಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
ಬೆಳಿಗ್ಗೆಯಿಂದ ಸಂಜೆ 4:30ರವರೆಗೆ ಪ್ರತಿಭಟನೆ ನಡೆಸಿದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಂದು ಹೋರಾಟಗಾರರ ಮನವಿಯನ್ನು ಆಲಿಸದಿರುವುದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯೂ ಸೇರಿದಂತೆ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಅವರು ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ವಹಿಸಿರುವುದಾಗಿ ಆರೋಪಿಸಲಾಗಿದೆ.
ಈ ವೇಳೆ ಮಾತನಾಡಿದ ಯಡೆಹಳ್ಳಿ ಮಂಜುನಾಥ್, “ಅಧಿಕಾರಿಗಳೇ ಭ್ರಷ್ಟ ವ್ಯವಸ್ಥೆಗೆ ಕೈಜೋಡಿಸಿದ್ದರೆ ಅಭಿವೃದ್ಧಿ ಹೇಗೆ ಸಾಧ್ಯ? ಬೆಳಗ್ಗಿನಿಂದಲೇ ತಾಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರೂ ಸಮಸ್ಯೆ ಪರಿಹರಿಸುವ ಮನಸ್ಸು ಯಾರಲ್ಲೂ ಕಾಣಿಸುತ್ತಿಲ್ಲ. ಕೂಡಲೇ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸ್ಥಳಕ್ಕೆ ಬಂದು ಸಮಸ್ಯೆಯನ್ನು ಆಲಿಸಿ ಸಂಬಂಧಿತ ಅಧಿಕಾರಿಯನ್ನು ಅಮಾನತು ಮಾಡದಿದ್ದರೆ ನಾಳೆಯಿಂದ ಇನ್ನೂ ಉಗ್ರ ಹೋರಾಟ ಕೈಗೊಳ್ಳಲಾಗುವುದು,” ಎಂದು ಎಚ್ಚರಿಸಿದರು.
ಹಾಸನ ಜಿಲ್ಲಾ ಕರವೇ ಪ್ರಧಾನ ಕಾರ್ಯದರ್ಶಿ ರಘು ಪಾಳ್ಯ ಮಾತನಾಡಿ, “ರಕ್ಷಣಾ ವೇದಿಕೆಯ ಮನವಿಗೆ ಬೆಲೆ ಕೊಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಬೆಳಗ್ಗಿನಿಂದ ಪ್ರತಿಭಟನೆ ನಡೆಸುತ್ತಿದ್ದರೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬಾರದಿರುವುದು ಸರಿಯಲ್ಲ. ನಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಗುವವರೆಗೆ ಆಹೋರಾತ್ರಿ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರಿಯಲಿದೆ,” ಎಂದು ಹೇಳಿದರು.
ತಾಲೂಕು ಪಂಚಾಯಿತಿ ಕಚೇರಿ ಎದುರು “ಸಮಸ್ಯೆ ಕೇಳದ ಆಡಳಿತ – ಬೀದಿಗಿಳಿದ ಜನತೆ” ಎಂಬ ವಾತಾವರಣ ನಿರ್ಮಾಣವಾಗಿದ್ದು, ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ.

ಕರವೇ ಪ್ರತಿಭಟನೆಗೆ ಅಧಿಕಾರಿಗಳ ನಿರ್ಲಕ್ಷ್ಯ – ಪಿಡಿಓ ಅಮಾನತ್ತಿಗೆ ಆಹೋರಾತ್ರಿ ಧರಣಿ.
ಸಕಲೇಶಪುರ: ಬಾಗೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣದ ಕಾರ್ಯಕರ್ತರು ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೆಳಗ್ಗಿನಿಂದ ಸಂಜೆವರೆಗೆ ಧರಣಿ ನಡೆದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸದಿರುವುದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಕೂಡ ಸ್ಪಂದಿಸದಿರುವುದನ್ನು ಖಂಡಿಸಿದ ಹೋರಾಟಗಾರರು, ಬೇಡಿಕೆ ಈಡೇರುವವರೆಗೆ ಆಹೋರಾತ್ರಿ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.
“ಸಮಸ್ಯೆ ಕೇಳದ ಆಡಳಿತ – ಬೀದಿಗಿಳಿದ ಜನತೆ” ಎಂಬ ವಾತಾವರಣ ತಾಲೂಕು ಪಂಚಾಯಿತಿ ಎದುರು ನಿರ್ಮಾಣವಾಗಿದೆ.
