Blog

ಅರೇ ಹಳ್ಳಿ ಬಳಿ ಇನ್ನೋವಾ ಕಾರು ಪಲ್ಟಿ

ಬೇಲೂರು: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರೊಂದು ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದು ಜಖಂಗೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ.

ಘಟನೆಯ ವಿವರ:
ಬೇಲೂರು……
ಏಪ್ರಿಲ್ 02ರ ಗುರುವಾರ ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆಗೆ ಲಿಂಗಾಪುರ ಸ್ಮಶಾನದ ಸಮೀಪ ಈ ಅಪಘಾ*ತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರು ಚಾಲಕನ ಹತೋಟಿ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ನುಗ್ಗಿದೆ.

ನಜ್ಜುಗುಜ್ಜಾದ ಕಾರು:

ಅಪಘಾ*ತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನೋಡುಗರ ಎದೆಯಲ್ಲಿ ನಡುಕ ಹುಟ್ಟಿಸುವಂತಿತ್ತು. ಅದೃಷ್ಟವಶಾತ್, ಇಷ್ಟೊಂದು ದೊಡ್ಡ ಮಟ್ಟದ ಅಪಘಾ*ತ ಸಂಭವಿಸಿದರೂ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪೊಲೀಸರ ಭೇಟಿ:

ವಿಷಯ ತಿಳಿಯುತ್ತಿದ್ದಂತೆಯೇ ಅರೇಹಳ್ಳಿ ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದು, ಕ್ರೇನ್ ಮೂಲಕ ಕಾರನ್ನು ಮೇಲೆತ್ತುವ ಕಾರ್ಯ ನಡೆದಿದೆ. ಅರೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Related posts

ಬೇಲೂರುನಲ್ಲಿ ಡಿ ಜೆ ಸೌಂಡ್ ಸಂಪೂರ್ಣ ನಿಷೇಧ

Bimba Prakashana

ರಸ್ತೆ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಯ ಆರೋಗ್ಯ ವಿಚಾರಿಸಿದ ಶಾಸಕ ಸಿಮೆಂಟ್ ಮಂಜುನಾಥ್

Bimba Prakashana

ನೌಕರರ ಸಂಘದಿಂದ ಉಪ ವಿಭಾಗ ಅಧಿಕಾರಿ ಭೇಟಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More