ಆಲೂರು : ಡಾ.ಬಿ.ಆರ್.ಅಂಬೇಡ್ಕರ್ ಭಾರತದ ಸಾಮಾಜಿಕ ಸಮಾನತೆಯ ಹರಿಕಾರ. ಸಾಮಾಜಿಕವಾಗಿ ಬಹಿಷ್ಕಾರಕ್ಕೆ ಒಳಗಾದ ದೀನ ದಲಿತರ ಏಳಿಗೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಅವರ ಆದರ್ಶಗಳು ಎಲ್ಲ ವರ್ಗದ ಜನರಿಗೂ ಮಾದರಿಯಾಗಿವೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಆಲೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿರುವ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ 135 ನೇ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಮಾಲಾರ್ಪಣೆ ಮಾಡಿ ಮಾತನಾಡಿದರು. ಅಂಬೇಡ್ಕರ್ ಅವರ ಸಂವಿಧಾನದ ಮೂಲಕ ಭಾರತವನ್ನು ಸಮಾನತೆ, ಸಮತೆ, ಭ್ರಾತೃತ್ವ ಮತ್ತು ಜಾತ್ಯತೀತ ಪರಿಕಲ್ಪನೆಗಳ ಅಡಿಯಲ್ಲಿ ನಿರ್ಮಿಸುವುದಕ್ಕೆ ಅಡಿಪಾಯ ಹಾಕಿದರು.
ಶಿಕ್ಷ ಣ, ಸಂಘಟನೆ, ಹೋರಾಟಗಳೇ ಅಂಬೇಡ್ಕರ್ ಅವರ ಜೀವನದ ಮೂಲತತ್ವಗಳಾಗಿದ್ದವು. ತಮ್ಮ ವೈಯಕ್ತಿಕ ಬದುಕನ್ನು ಲೆಕ್ಕಿಸದೇ ದೇಶದ ಹಾಗೂ ಜನರ ಒಳಿತಿಗಾಗಿ ಸಂವಿಧಾನ ರಚಿಸಿ ಕೊಟ್ಟಿದ್ದಾರೆ.
