Blog

ಸಕಲೇಶಪುರ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಸಕಲೇಶಪುರ ತಾಲೂಕಿನ ಸರ್ಕಾರಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿಯರು

ಸಕಲೇಶಪುರ: ತಾಲೂಕಿನ ಜಿಹೆಚ್‌ ಉದೇವಾರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಪ್ರಿಯಾ ಕೆ.ಎಂ (616/625 – 98.56%) ಹಾಗೂ ಬಿಂದು ಯು.ಡಿ (610/625 – 97.6%) ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ತಾಲೂಕು ಮಟ್ಟದಲ್ಲಿ ಸರ್ಕಾರಿ ಶಾಲೆಯಿಂದಲೇ ಉನ್ನತ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.

ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಇಷ್ಟು ಉನ್ನತ ಶೇಕಡಾವಾರು ಅಂಕಗಳನ್ನು ಗಳಿಸಿರುವುದು ಇವರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಬೆಂಬಲದ ಫಲವಾಗಿದೆ. ಇವರ ಸಾಧನೆಯಿಂದ ಜಿಹೆಚ್‌ಎಸ್ ಉದೇವಾರ ಶಾಲೆಗೆ ತಾಲೂಕು ಮಟ್ಟದಲ್ಲಿ ವಿಶೇಷ ಕೀರ್ತಿ ಲಭಿಸಿದೆ.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಇಬ್ಬರು ವಿದ್ಯಾರ್ಥಿನಿಯರ ಸಾಧನೆಯನ್ನು ಹರ್ಷದಿಂದ ಅಭಿನಂದಿಸಿದ್ದಾರೆ.

ಸರ್ಕಾರಿ ಶಾಲೆಯಲ್ಲಿಯೂ ಉತ್ತಮ ಶಿಕ್ಷಣ ಪಡೆದು ದೊಡ್ಡ ಸಾಧನೆ ಮಾಡಬಹುದು ಎಂಬುದಕ್ಕೆ ಪ್ರಿಯಾ ಹಾಗೂ ಬಿಂದು ಅವರು ಮಾದರಿಯಾಗಿದ್ದಾರೆ ಎಂದು ಶಿಕ್ಷಣ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

Related posts

ಅಬ್ಬನ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಚಂದ್ರ ಶೆಟ್ಟಿ

Bimba Prakashana

ಅಕ್ರಮ ಮರ ವಶಕ್ಕೆ ಪಡೆದ ಅರಣ್ಯ ಇಲಾಖೆ

Bimba Prakashana

ಮಲೆನಾಡು ಭೀಮ ಧ್ವನಿ ಸಂಘದಿಂದ ಸನ್ಮಾನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More