Blog

ವೈಚಾರಿಕ ಪತ್ರಿಕೆಯಿಂದ ಪ್ರತಿಭೆ ಪುರಸ್ಕಾರ



ಸಕಲೇಶಪುರ: ವೈಚಾರಿಕ ಸಂಜೆ ದಿನಪತ್ರಿಕೆ ವತಿಯಿಂದ ದ್ವಿತೀಯ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2025–26ನೇ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ (SSLC) ಹಾಗೂ ಪಿಯುಸಿ (PUC) ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಕಲೇಶಪುರ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದವರು, ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿರುವವರು (ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು), ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು, ಕನ್ನಡ ಭಾಷೆಗೆ ಆದ್ಯತೆ ನೀಡುವ ಮನೋಭಾವವನ್ನು ಬೆಳೆಸುವುದು ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರೇರಣೆ ಒದಗಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಅರ್ಹ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ತಿಂಗಳ 8ನೇ ತಾರೀಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ :- 7899533643,9353526694

ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಅರ್ಹ ವಿದ್ಯಾರ್ಥಿಗಳು ತಮ್ಮ ಸಾಧನೆಗೆ ಮಾನ್ಯತೆ ಪಡೆಯಲು ಅರ್ಜಿ ಸಲ್ಲಿಸುವಂತೆ ವಿನಂತಿಸಲಾಗಿದೆ.

Related posts

ಸಕಲೇಶಪುರ ತೇಜಸ್ವಿ ವೃತ್ತದಲ್ಲಿ ಒತ್ತುವರಿ ತೆರವು

Bimba Prakashana

ಮಲೆನಾಡು ಭಾಗದ ಶಾಲೆಗಳ ದುರಸ್ತಿಗೆ ಸರಕಾರ ಅನುದಾನ ಬಿಡುಗಡೆ ಮಾಡಲಿ

Bimba Prakashana

ಆಲೂರುನಲ್ಲಿ ರೈಲ್ವೆ ನಿಲುಗಡೆ ಆಗಲು ಕಾರಣ ಯಾರು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More