Blog

ಹೆತ್ತೂರುನಲ್ಲಿ ಡಾ ಅಂಬೇಡ್ಕರ್ ಜಯಂತಿ ಆಚರಣೆ

ಹೆತ್ತೂರಿನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ

ಸಕಲೇಶಪುರ ತಾಲ್ಲೂಕಿನ ಹೆತ್ತೂರು ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಭಾಗವಹಿಸಿದ್ದ ಬ್ಯಾಕರವಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಶತೇಂದ್ರ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಹೋರಾಟ ಮತ್ತು ಶಿಕ್ಷಣದ ಮೌಲ್ಯಗಳನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾಭ್ಯಾಸದಲ್ಲಿ ಯಶಸ್ಸು ಸಾಧಿಸಿ ತಮ್ಮ ಗುರಿಯನ್ನು ತಲುಪಬೇಕು ಎಂದು ಹಿತವಚನ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪಿ.ಡಿ.ಒ ಕೊಮರಯ್ಯ, ಎತ್ತಿನಹೊಳೆ ಇಲಾಖೆಯ ಕೆಂಚಯ್ಯ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ಹೆತ್ತೂರಿನ ಅಣ್ಣಯ್ಯ ಸೇರಿದಂತೆ ಗ್ರಾಮದ ಮುಖಂಡರು  ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Related posts

ಎಣ್ಣೆ ಅಮಲು  -ಡಿಕ್ಕಿ-  ಜಖಂ

Bimba Prakashana

ಜಿಲ್ಲಾ ಮಟ್ಟಕ್ಕೆ ಆಯ್ಕೆ ಆದ ಶ್ರೀ ರಂಗನಾಥ ಪ್ರೌಢ ಶಾಲಾ ವಿದ್ಯಾರ್ಥಿಗಳು

Bimba Prakashana

ಬೇಲೂರುನಲ್ಲಿ ರೌಡಿ ಶೀಟರ್ ಅನುಮಾನಸ್ಪದ ಸಾವು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More