Blog

ವೈಚಾರಿಕ ಪತ್ರಿಕೆ ಹಾಗೂ ವಿವಿಧ ಸಂಘಟನೆಗಳಿಂದ ಉಚಿತ ಆರೋಗ್ಯ ಶಿಬಿರ

ವೈಚಾರಿಕ ದಿನಪತ್ರಿಕೆ ಹಾಗೂ ವಿವಿಧ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ಜೂನ್ 5ರಂದು ಬೃಹತ್ ಉಚಿತ ಆರೋಗ್ಯ ಶಿಬಿರ

ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿಕೂಡಿಗೆಯ ಹೆಚ್.ಡಿ. ದೇವೇಗೌಡ ವಕ್ಕಲಿಗರ ಸಮುದಾಯ ಭವನದಲ್ಲಿ ಜೂನ್ 5ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಆದಿಚುಂಚನಗಿರಿ ಆಸ್ಪತ್ರೆ, ವೈಚಾರಿಕ ಸಂಜೆ ದಿನಪತ್ರಿಕೆ, ವಳಲಹಳ್ಳಿ ಗ್ರಾಮ ಪಂಚಾಯಿತಿ, ಬೆಳೆಗಾರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸಕಲೇಶಪುರ ಘಟಕ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ನಡೆಯಲಿದೆ.

ಶಿಬಿರದಲ್ಲಿ ಹೃದ್ರೋಗ, ಮಧುಮೇಹ, ಕಣ್ಣು, ಕಿವಿ-ಮೂಗು-ಗಂಟಲು, ಕೀಲು-ಮೂಳೆ, ಶಸ್ತ್ರಚಿಕಿತ್ಸೆ, ಸ್ತ್ರೀರೋಗ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಭಾಗವಹಿಸಿ ಉಚಿತ ತಪಾಸಣೆ ಹಾಗೂ ಸಲಹೆ ನೀಡಲಿದ್ದಾರೆ. ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೂ ವಿಶೇಷ ಚಿಕಿತ್ಸೆ ಹಾಗೂ ಸಲಹೆ ವ್ಯವಸ್ಥೆ ಮಾಡಲಾಗಿದೆ.

ಉಚಿತ ಇಸಿಜಿ, ರಕ್ತಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವವರಿಗೆ ಆದಿಚುಂಚನಗಿರಿ ಆಸ್ಪತ್ರೆಗೆ ಉಚಿತ ವಾಹನ ವ್ಯವಸ್ಥೆಯೊಂದಿಗೆ ಕರೆದೊಯ್ಯುವ ಸೌಲಭ್ಯವೂ ಕಲ್ಪಿಸಲಾಗಿದೆ.

ಕಾರ್ಯಕ್ರಮವನ್ನು ಶಾಸಕ ಶ್ರೀ ಸಿಮೆಂಟ್ ಮಂಜು ಉದ್ಘಾಟಿಸಲಿದ್ದು, ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ವೈದ್ಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Related posts

ಬೇಲೂರು ಶಾಸಕರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Bimba Prakashana

ಐ ಹಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ

Bimba Prakashana

ಸೈಟ್ ಹೆಸರಲ್ಲಿ ವಂಚನೆ ಮಾಡುತ್ತಿದ್ದಾರಾ ಈ ಹೋರಾಟಗಾರ – ಯಾರೀತ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More