Blog

ಬೇಲೂರು ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷರಾಗಿ ರಘು



ಬೇಲೂರು:

ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬೇಲೂರು ವಿಧಾನಸಭಾ ಕ್ಷೇತ್ರದ ವಿವಿಧ ಮೋರ್ಚಾಗಳು ಹಾಗೂ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಈ ನೇಮಕಾತಿ ಪಟ್ಟಿಯಲ್ಲಿ ಎಸ್ಸಿ ಮೋರ್ಚಾ ಅಧ್ಯಕ್ಷರಾಗಿ ರಘು ಶಂಭುಗನಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಸಂಜಯ್ ಕೌರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ನೇಮಕಾತಿಗಳನ್ನು ಕೈಗೊಳ್ಳಲಾಗಿದ್ದು, ಸಮಾಜದ ವಿವಿಧ ವರ್ಗಗಳೊಂದಿಗೆ ಪಕ್ಷದ ಸಂಪರ್ಕವನ್ನು ವೃದ್ಧಿಸಲು ಹೊಸ ಪದಾಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಅವರು ಹೇಳಿದರು.

ಎಸ್ಸಿ ಮೋರ್ಚಾ ಅಧ್ಯಕ್ಷರಾಗಿ ನೇಮಕಗೊಂಡಿರುವ ರಘು ಶಂಭುಗನಹಳ್ಳಿ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಹಲವು ವರ್ಷಗಳಿಂದ ಸಂಘಟನೆಗಾಗಿ ದುಡಿಯುತ್ತಿದ್ದಾರೆ. ಅವರ ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ನೇಮಕಾತಿಯ ಬಳಿಕ ಮಾತನಾಡಿದ ರಘು ಶಂಭುಗನಹಳ್ಳಿ, ಪಕ್ಷವು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಎಸ್ಸಿ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಪಕ್ಷದ ತತ್ವ, ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು.

ಪಕ್ಷದ ರಾಜ್ಯ ಹಾಗೂ ಜಿಲ್ಲಾ ನಾಯಕತ್ವದ ಮಾರ್ಗದರ್ಶನದಲ್ಲಿ ಬೇಲೂರು ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಎಲ್ಲ ಕಾರ್ಯಕರ್ತರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದರು.

Related posts

ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಹಲ್ಲೆ ಪ್ರಕರಣ – ಜೈಲಿನಲ್ಲಿರುವ ಕಾರ್ಯಕರ್ತರ ಭೇಟಿ ಮಾಡಿದ ಉಪ ಸಭಾಪತಿ ಹಾಗೂ ಶಾಸಕರು

Bimba Prakashana

ಪೊಲೀಸರೆ ಜೀವ ಉಳಿಸಿದರು

Bimba Prakashana

ಲೈಟ್ ಕಂಬಕ್ಕೆ ಡಿಕ್ಕಿ ಆದ ಗೋ ಕಳ್ಳತನ ವಾಹನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More