Blog

ಹೆತ್ತೂರುನಲ್ಲಿ ಯೋಗದಿನಾಚರಣೆ

ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರಿನಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ


ಹೆತ್ತೂರು :- ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರಿನಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ದೇವನಹಳ್ಳಿಯ ಯೋಗ ತರಬೇತಿದಾರರಾದ ಶ್ರೀಯುತ ಸುರೇಶ್ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನ ವಿಧಾನಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು.

ಯೋಗವು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ, ಏಕಾಗ್ರತೆ ಮತ್ತು ಆತ್ಮಸ್ಥೈರ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.


ಈ ಸಂದರ್ಭದಲ್ಲಿ ಹಿರಿಯ ಯೋಗಪಟುವಾದ ಶ್ರೀಮತಿ ಜಾಜಮ್ಮ ಹೆತ್ತೂರು, ಶ್ರೀಯುತ ಪ್ರಕಾಶ್ ದೇವನಹಳ್ಳಿ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾದ ಶ್ರೀಯುತ ಹರೀಶ್ ಕರಡಿಗಾಲ, ಮಾಜಿ ಅಧ್ಯಕ್ಷರಾದ ಶ್ರೀ ಸಚಿನ್ ಹೆತ್ತೂರು, ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಶ್ರೀ ಮಂಜುನಾಥ ಬಿ.ಡಿ., ಉಪ ಪ್ರಾಂಶುಪಾಲರಾದ ಶ್ರೀ ಭಾಸ್ಕರ್ ಬಿ., ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್, ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು, ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನಶೈಲಿ, ಯೋಗದ ಮಹತ್ವ ಹಾಗೂ ದೈನಂದಿನ ಬದುಕಿನಲ್ಲಿ ಯೋಗಾಭ್ಯಾಸದ ಅಗತ್ಯತೆಯ ಕುರಿತು ಅರಿವು ಮೂಡಿಸಲಾಯಿತು.
“ಯೋಗವು ದೇಹ, ಮನಸ್ಸು ಮತ್ತು ಆತ್ಮದ ಸಮನ್ವಯದ ಮಾರ್ಗವಾಗಿದೆ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

Related posts

ಬೇಲೂರು ನವರಾತ್ರಿ ಮಂಟಪಕ್ಕೆ ಕುಸಿತ ಭೀತಿ

Bimba Prakashana

ಸಿದ್ದಗಂಗಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಹಕಾರ

Bimba Prakashana

ಶಿಕ್ಷಣ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿರುವ ಇನ್ ಸ್ಪೇರ್ ಇಂಟರ್ ನ್ಯಾಷನಲ್ ಸ್ಕೂಲ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More