ಸಕಲೇಶಪುರ ತಾಲೂಕಿನ ಯಸಳೂರು ಠಾಣೆ ವ್ಯಾಪ್ತಿಯ ಚಿಕ್ಕಂದೂರು ಗ್ರಾಮ ಅರಣ್ಯ ಪ್ರದೇಶದಲ್ಲಿ ಅತಿವೇಗವಾಗಿ ಸಂಚರಿಸುತ್ತಿದ್ದ ಒಂದು ಪಿಕಪ್ ವಾಹನವನ್ನು ಸಂಖ್ಯೆ KA 12 B 9784 ಸ್ಥಳೀಯರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಪರಿಶೀಲಿಸಿದರು. ಈ ವೇಳೆ ವಾಹನದಲ್ಲಿ ಯಾವುದೇ ನಿಯಮಗಳನ್ನು ಪಾಲಿಸದೆ, ಪಶುವೈದ್ಯರಿಂದ ಅಥವಾ ಗ್ರಾಮಪಂಚಾಯಿತಿ ಅನುಮತಿ ಪಡೆಯದೇ ಅತ್ಯಂತ ಕ್ರೂರ ಹಾಗೂ ಅಮಾನವೀಯ ರೀತಿಯಲ್ಲಿ ಸಾಗಿಸಲಾಗುತ್ತಿದ್ದ ಮೂರು ಹಸುಗಳು ಪತ್ತೆಯಾದವು.
ವಾಹನ ಚಾಲಕನಾದ ಚೇತನ್ ನನ್ನು ವಿಚಾರಣೆ ನಡೆಸಿದಾಗ, ಜಾನುವಾರುಗಳ ಸಾಗಾಣಿಕೆಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಆತನ ಬಳಿ ಇರಲಿಲ್ಲ. ಇದರಿಂದ ಅನುಮಾನಗೊಂಡ ಸ್ಥಳೀಯರು ವಾಹನವನ್ನು ಪೊಲೀಸ್ ಠಾಣೆಗೆ ಕೊಂಡೊಯ್ಯುವಂತೆ ಸೂಚಿಸಿದರು. ಆದರೆ ಚಾಲಕನು ಚಿಕ್ಕಂದೂರು ರಕ್ಷಿತ ಅರಣ್ಯ ಪ್ರದೇಶದೊಳಗೆ ವಾಹನವನ್ನು ಚಲಾಯಿಸಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ.
ಈ ಕುರಿತು ಈಗಾಗಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಗಿದೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಪತ್ತೆಹಚ್ಚಿ, ಆ ಮೂರು ಹಸುಗಳ ನಿಜವಾದ ಮಾಲೀಕರು ಯಾರು ಎಂಬುದನ್ನು ಪರಿಶೀಲಿಸಿ ಅವರಿಗೆ ಹಸ್ತಾಂತರಿಸಬೇಕು. ಜೊತೆಗೆ ಜಾನುವಾರುಗಳನ್ನು ಅತ್ಯಂತ ಕ್ರೂರವಾಗಿ ಸಾಗಿಸಿರುವುದು, ಅತಿವೇಗದ ಚಾಲನೆ ನಡೆಸಿರುವುದು ಹಾಗೂ ರಕ್ಷಿತ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ಆರೋಪಗಳಡಿ ಚೇತು ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಲಾಗಿದೆ.
ಈ ಸಂಬಂಧ ಪೊಲೀಸ್ ಅಧಿಕಾರಿಗಳು ಈಗಾಗಲೇ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
previous post
next post
