Blog

ಯರಗಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಯರಗಳ್ಳಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಸಕಲೇಶಪುರ :- ತಾಲೂಕಿನ ಹೊಂಗಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಗಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ದೊರೆತಿದೆ.

ಗ್ರಾಮದಲ್ಲಿ ಅಂದಾಜು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಕಾಮಗಾರಿಗೆ ಶಾಸಕ ಸಿಮೆಂಟ್ ಮಂಜು ಅವರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.

ಗ್ರಾಮದ ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಾದ ಸುಬ್ರಮಣ್ಯ ವೈ.ಪಿ., ಪ್ರಜ್ವಲ್ ವೈ.ಆರ್., ಸುನಿಲ್ ವೈ.ಎಂ., ಅಮೃತ್, ಪ್ರಸನ್ನ, ಗಣೇಶ್, ಬಾಲು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಯರಗಳ್ಳಿ ಗ್ರಾಮದ ಮುಖಂಡರಾದ ವೈ.ಆರ್. ವೀರೇಶ್, ವೈ.ಆರ್. ರವಿ, ವೈ.ಪಿ. ಪ್ರಸಿದ್ಧ, ವೈ.ಕೆ. ಪರಮೇಶ್ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಮಗಾರಿಗೆ ಶುಭ ಹಾರೈಸಿದರು.

Related posts

ವೃತ್ತ ನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡ ಶಾಸಕರು

Bimba Prakashana

🔴ಬೇಕಾಗಿದ್ದಾರೆ

Bimba Prakashana

ಯಸಳೂರುನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಪುತ್ತಳಿ ನಿರ್ಮಾಣಕ್ಕೆ ನಿರ್ಧಾರ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More