Blog

ಗ್ರಾಮೀಣ ಭಾಗದ ಬಸ್ ಸಮಸ್ಯೆ ಪರಿಹಾರಕ್ಕೆ ಹೆಚ್ ಡಿ ಕುಮಾರ ಸ್ವಾಮಿ ಸ್ಪಂದನೆ

🔴ಗ್ರಾಮೀಣ ಭಾಗದ ಸಾರಿಗೆ ಸಮಸ್ಯೆ ಪರಿಹಾರಕ್ಕೆ ಸಂಸದ ಹೆಚ್.ಡಿ. ಕುಮಾರಸ್ವಾಮಿ ಸ್ಪಂದನೆ

🔴ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ಒತ್ತಾಯ

ಸಕಲೇಶಪುರ :- ಗ್ರಾಮೀಣ ಭಾಗದ ಜನರ ಬಹುದಿನಗಳ ಸಾರಿಗೆ ಸಮಸ್ಯೆಗೆ ಸ್ಪಂದಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು, ಬೆಂಗಳೂರು–ಮಂಗಳೂರು ಸಂಪರ್ಕಿಸುವ ನೂತನ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭಿಸುವಂತೆ ರಾಜ್ಯ ಸಾರಿಗೆ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಂಗಳೂರು–ಚನ್ನರಾಯಪಟ್ಟಣ–ಹೊಳೆನರಸೀಪುರ–ಅರಕಲಗೂಡು–ಮಲ್ಲಿಮಟ್ಟಣ–ಶನಿವಾರಸಂತೆ–ಕೂಡುರಸ್ತೆ–ಹತ್ತೂರು–ವಳಲಹಳ್ಳಿ–ಕೂಡಿಗೆ–ವಳಸಹಳ್ಳಿ–ಹಿರದನಹಳ್ಳಿ–ಕಡಗರವಳ್ಳಿ–ಮಾರನಹಳ್ಳಿ–ಉಪ್ಪಿನಂಗಡಿ–ಮಂಗಳೂರು ಮಾರ್ಗದಲ್ಲಿ ನೂತನ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಂಸದರು ಮನವಿಯಲ್ಲಿ ತಿಳಿಸಿದ್ದಾರೆ.

ಈ ಮಾರ್ಗದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಜನರು ಶಿಕ್ಷಣ, ಉದ್ಯೋಗ, ಆರೋಗ್ಯ ಚಿಕಿತ್ಸೆ ಹಾಗೂ ವ್ಯಾಪಾರ-ವಹಿವಾಟುಗಳಿಗಾಗಿ ಬೆಂಗಳೂರು ಮತ್ತು ಮಂಗಳೂರು ನಗರಗಳನ್ನು ಅವಲಂಬಿಸಿದ್ದು, ಸಮರ್ಪಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ.

ಜನರ ಅನುಕೂಲಕ್ಕಾಗಿ ಬೆಂಗಳೂರು ನಗರದಿಂದ ರಾತ್ರಿ ವೇಳೆಯಲ್ಲಿ ಹೊರಡುವಂತೆ ಹಾಗೂ ಮಂಗಳೂರಿನಿಂದ ಸಂಜೆ ವೇಳೆಯಲ್ಲಿ ವಾಪಸ್ ಸಂಚರಿಸುವಂತೆ ಬಸ್ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂದು ಸಂಸದರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಾರ್ವಜನಿಕರ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವರು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಕೋರಿದ್ದಾರೆ.

ಗ್ರಾಮೀಣ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಕ್ರಮ ಕೈಗೊಳ್ಳಲು ಮುಂದಾಗಿರುವ ಸಂಸದರ ಪ್ರಯತ್ನಕ್ಕೆ ಈ ಭಾಗದ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ನಾರ್ವೆ ಎನ್ ಎಂ ರಾಜಶೇಖರ್ ನಿಧನ

Bimba Prakashana

ವೈಚಾರಿಕ ಪತ್ರಿಕೆ ಹಾಗೂ ವಿವಿಧ ಸಂಘಟನೆಗಳಿಂದ ಉಚಿತ ಆರೋಗ್ಯ ಶಿಬಿರ

Bimba Prakashana

ಸಕಲೇಶಪುರದಲ್ಲಿ ಈಜಾಟ ವ್ಯವಸ್ಥೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More