Blog

ಮಾದಕ ವಸ್ತು ಮಾರಾಟ – ಓರ್ವ ಬಂಧನ

ಸಕಲೇಶಪುರ: ನಗರದಲ್ಲಿ ಅ.ಕ್ರ.ಮವಾಗಿ ಮಾ*ದ*ಕ ವಸ್ತುವನ್ನು ಕಾರಿನಲ್ಲಿಟ್ಟುಕೊಂಡು ಮಾ.ರಾ.ಟ ಮಾಡಲು ಯತ್ನಿಸುತ್ತಿದ್ದ ಕೊಡಗು ಮೂಲದ ವ್ಯಕ್ತಿಯೊಬ್ಬನನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.


ಬಂಧಿತ ಆರೋಪಿಯಿಂದ ಸುಮಾರು ₹2.5 ಲಕ್ಷ ಮೌಲ್ಯದ 25 ಗ್ರಾಂ ಎ*ಡಿಎ*ಎ (MDM@) ಮಾ*ದ*ಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಘಟನೆಯ ವಿವರ:
ದಿನಾಂಕ 05/08/2026 ರಂದು ಮಧ್ಯಾಹ್ನ ಸುಮಾರು 02.15 ಗಂಟೆಯ ವೇಳೆಗೆ, ಸಕಲೇಶಪುರ ಟೌನ್‌ನ ಗುರುದೇವ ಪೆಟ್ರೋಲ್ ಬಂಕ್ ಬಳಿ ಇರುವ ನಾಗ್ ಎನ್‌ಕ್ಲೇವ್ ಲೇಔಟ್ ಪ್ರದೇಶದಲ್ಲಿ ಕಾರಿನಲ್ಲಿ ವ್ಯಕ್ತಿಯೊಬ್ಬ ಮಾ*ದ*ಕ ಪದಾರ್ಥ ಮಾ.ರಾ.ಟ ಮಾಡುತ್ತಿರುವ ಬಗ್ಗೆ ಸಕಲೇಶಪುರ ನಗರ ಪೊಲೀಸ್ ಠಾಣೆಯ ಅಪರಾ🚫ಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ ಕೆ.ಎಸ್. ಅವರಿಗೆ ಖಚಿತ ಮಾಹಿತಿ ಲಭಿಸಿತ್ತು.
ಮಾಹಿತಿ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರ ತಂಡ, ಸ್ಥಳದ ಮೇಲೆ ಹಠಾತ್ ದಾ*ಳಿ ನಡೆಸಿ ಕೊಡಗು ಮೂಲದ ಅಜರುದ್ದೀನ್ ಎಂಬಾತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಪರಿಶೀಲನೆ ನಡೆಸಿದಾಗ ಆತನ ಬಳಿ ಇದ್ದ 25 ಗ್ರಾಂ ತೂಕದ ಎ*ಡಿಎ*ಎ ಪತ್ತೆಯಾಗಿದೆ.
ಪ್ರಕರಣ ದಾಖಲು & ನ್ಯಾಯಾಂಗ ಬಂಧನ:
ಬಂಧಿತ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸ್ ತಂಡದ ಯಶಸ್ವಿ ಕಾರ್ಯಾಚರಣೆ:
ಸಕಲೇಶಪುರ ನಗರ ಪೊಲೀಸ್ ಇನ್ಸ್ಪೆಕ್ಟರ್ ವನರಾಜು ಅವರ ಮಾರ್ಗದರ್ಶನದಲ್ಲಿ, ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ ಕೆ.ಎಸ್. ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಠಾಣೆಯ ಸಿಬ್ಬಂದಿಗಳಾದ ಖಾದರ್ ಅಲಿ, ರೇವಣ್ಣ ಎಸ್.ಜೆ., ಶ್ರೀಧರ್, ರಾಕೇಶ್, ಸೋಮಶೇಖರ್, ಅಶೋಕ್, ಸುನಿಲ್ ಕುಮಾರ್, ಹನುಮಂತು, ಶಿವಕುಮಾರ್ ಹಾಗೂ ಚಾಲಕ ಮಧು ಭಾಗವಹಿಸಿದ್ದರು.

Related posts

ಶ್ರದ್ಧಾಂಜಲಿ ಸಲ್ಲಿಸಿದ ಜೆಡಿಎಸ್ ಮುಖಂಡರು

Bimba Prakashana

ಬೇಲೂರುನಲ್ಲಿ ಮಳಿಗೆಗಳ ಹರಾಜು ಪ್ರಕ್ರಿಯೆ

Bimba Prakashana

ಬೇಲೂರುನಲ್ಲಿ ಬಕ್ರೀದ್ ಹಬ್ಬದ ಆಚರಣೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More