Blog

ಆಸ್ಪತ್ರೆಗೆ ಸೌಲಭ್ಯ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗಾಗಿ ಅಗತ್ಯವಿರುವ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಲಾಯಿತು.


ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಲಭ್ಯವಿದ್ದರೂ, ಅವುಗಳ ಸೇವೆ ಜನರಿಗೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಇದರಿಂದ ನಮ್ಮ ಭಾಗದ ಜನರಿಗೆ, ವಿಶೇಷವಾಗಿ ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳು, ಗರ್ಭಿಣಿಯರು, ಹಿರಿಯ ನಾಗರಿಕರು ಹಾಗೂ ಬಡ ಕುಟುಂಬಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಈ ಸಮಸ್ಯೆಯನ್ನು ಪರಿಹರಿಸುವಂತೆ  ಹಲವು ತಿಂಗಳುಗಳಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ.

ಆರೋಗ್ಯ ಸೇವೆಗಳು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಅನಾರೋಗ್ಯವು ಯಾವಾಗ ಬೇಕಾದರೂ ಯಾರಿಗಾದರೂ ಎದುರಾಗಬಹುದು. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ಸೇವೆಗಳು ಸದಾ ಲಭ್ಯವಿರುವಂತೆ ನೋಡಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ.

ಸಮಯಕ್ಕೆ ಸರಿಯಾಗಿ ಸ್ಕ್ಯಾನಿಂಗ್, ಪರೀಕ್ಷೆಗಳು ಹಾಗೂ ಇತರ ಚಿಕಿತ್ಸಾ ಸೇವೆಗಳು ದೊರೆತರೆ ಅನೇಕ ಅಮೂಲ್ಯ ಜೀವಗಳನ್ನು ಉಳಿಸಬಹುದು. ಆದರೆ ಈ ಸೌಲಭ್ಯಗಳ ಕೊರತೆಯಿಂದ ರೋಗಿಗಳು ದೂರದ ನಗರಗಳಿಗೆ ತೆರಳಿ ಹೆಚ್ಚಿನ ಹಣ ಖರ್ಚು ಮಾಡಿ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಡವರು ಮತ್ತು ನಿರ್ಗತಿಕರು ಖಾಸಗಿ ಆಸ್ಪತ್ರೆಗಳ ದುಬಾರಿ ವೆಚ್ಚವನ್ನು ಭರಿಸಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ.



ಜನರ ಸಮಸ್ಯೆಗಳ ಬಗ್ಗಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಗಮನಹರಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು. ಆಸ್ಪತ್ರೆಯಲ್ಲಿರುವ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಎಲ್ಲಾ ವೈದ್ಯಕೀಯ ಉಪಕರಣಗಳನ್ನು ಕಾರ್ಯನಿರ್ವಹಣೆಗೆ ತಂದು, ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆಯನ್ನು ನಿವಾರಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕೆಂದು ಒತ್ತಾಯಿಸಲಾಯಿತು.

Related posts

ಆಲೂರುನಲ್ಲಿ ಸರಕಾರಿ ನೌಕರರ ಸಂಘದ ಮಹಾಸಭೆ

Bimba Prakashana

ಬೇಲೂರು ಚನ್ನ ಕೇಶವ ದೇವಾಲಯದ ಹುಂಡಿ ಹಣ ಎಣಿಕೆ – ವ್ಯಕ್ತಿ ಪೊಲೀಸ್ ವಶಕ್ಕೆ

Bimba Prakashana

ಅತ್ತೂರು ಪರ್ಪಲೆ ಕ್ಷೇತ್ರಕ್ಕೆ ಪವರ್ ಟಿ ವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಭೇಟಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More