Blog

ಅಂತರ್ ರಾಷ್ಟೀಯ ಕಾಫಿ ದಿನಾಚರಣೆಗೆ ಅಭಿಪ್ರಾಯ ಸಂಗ್ರಹ

🔴12ನೇ ಅಂತರಾಷ್ಟ್ರೀಯ ಕಾಫಿ ದಿನಾಚರಣೆಗೆ ಸಲಹೆ–ಅಭಿಪ್ರಾಯ ಸಂಗ್ರಹ

ಸಕಲೇಶಪುರ: ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷರಾದ ಶ್ರೀ ಮಂಜುನಾಥ ಶೆಟ್ಟಿ ಅವರು ಸಕಲೇಶಪುರದ ಎಚ್‌ಡಿಪಿಎ ಸಭಾಂಗಣದಲ್ಲಿ ನಡೆದ ವುಮೆನ್ಸ್ ಕಾಫಿ ಪ್ರಮೋಷನ್ ಕೌನ್ಸಿಲ್ ಸಭೆಯಲ್ಲಿ ಪಾಲ್ಗೊಂಡರು.

ಸಭೆಯಲ್ಲಿ ಮುಂಬರುವ 12ನೇ ಅಂತರಾಷ್ಟ್ರೀಯ ಕಾಫಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ವಿವಿಧ ಸಲಹೆ ಹಾಗೂ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಕಾಫಿ ಬೆಳೆಗಾರರು ಹಾಗೂ ಕಾಫಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವ ರೀತಿಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಚರ್ಚೆ ನಡೆಯಿತು.

ಅಂತರಾಷ್ಟ್ರೀಯ ಕಾಫಿ ದಿನಾಚರಣೆಯ ಕಾರ್ಯಕ್ರಮಕ್ಕೆ ವುಮೆನ್ಸ್ ಕಾಫಿ ಪ್ರಮೋಷನ್ ಕೌನ್ಸಿಲ್‌ನ ಎಲ್ಲಾ ಸದಸ್ಯರು ಸಕ್ರಿಯವಾಗಿ ಕೈಜೋಡಿಸುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು.

ಸಭೆಯಲ್ಲಿ ಕಾಫಿ ಕ್ಷೇತ್ರದ ಅಭಿವೃದ್ಧಿ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಹಕಾರ ನೀಡುವ ಕುರಿತು ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

Related posts

ಶಾಸಕರಿಂದ ಅಧಿಕಾರ ದುರುಪಯೋಗ – ಅಧಿಕಾರಿಗಳ ತೇಜೋವದೆ

Bimba Prakashana

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಅವ್ಯವಹಾರ : ವರ್ತಕರ ಸಂಘ ಆಕ್ರೋಶ

Bimba Prakashana

ಹಾಸನದಲ್ಲಿ ಚುಟುಕು ಸಾಹಿತ್ಯ ಸಮ್ಮೇಳನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More