Blog

ಅಧಿಕಾರಿಗಳ ಗೈರು ವಳಲ ಹಳ್ಳಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

ಅಧಿಕಾರಿಗಳ ಗೈರು: ವಳಲಹಳ್ಳಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

ಸಕಲೇಶಪುರ: ತಾಲ್ಲೂಕಿನ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2026–27ನೇ ಸಾಲಿನ ಮೊದಲ ಹಂತದ ಗ್ರಾಮಸಭೆ ಮಂಗಳವಾರ ನಡೆಯಿತು. ಗ್ರಾಮಸಭೆಗೆ ಬಹುತೇಕ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಗ್ರಾಮಸಭೆಯ ನೋಡಲ್ ಅಧಿಕಾರಿಯಾದ ಇಂದಿರಾ ಉದ್ಘಾಟಿಸಿದರು.

ಗ್ರಾಮಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ, ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿತ್ತು. ಆದರೆ ಬೆರಳೆಣಿಕೆಯಷ್ಟು ಅಧಿಕಾರಿಗಳು ಮಾತ್ರ ಸಭೆಗೆ ಹಾಜರಾಗಿದ್ದರಿಂದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಗ್ರಾಮಸಭೆಗೆ ಆಗಮಿಸಿದ್ದರೂ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗೈರಾಗಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಸ್ಥರ ಸಮಸ್ಯೆಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಗ್ರಾಮಸಭೆಗೆ ಕಡ್ಡಾಯವಾಗಿ ಹಾಜರಾಗಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲೇ ಸ್ಪಂದಿಸುವ ವ್ಯವಸ್ಥೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

Related posts

ಮಾದಕ ವಸ್ತು ಮಾರಾಟ – ಓರ್ವ ಬಂಧನ

Bimba Prakashana

ಯಸಳೂರು ನಾಡ ಕಚೇರಿಯಲ್ಲಿ…

Bimba Prakashana

ಬೇಲೂರು ಚನ್ನ ಕೇಶವ ದೇವಾಲಯದ ಹುಂಡಿ ಹಣ ಎಣಿಕೆ – ವ್ಯಕ್ತಿ ಪೊಲೀಸ್ ವಶಕ್ಕೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More