Blog

ಸಮಾಜ ರಕ್ಷಣಾ ಸೇನೆ ಹಾಸನ ಜಿಲ್ಲಾಧ್ಯಕ್ಷರಾಗಿ ಪ್ರೀತಮ್

ಸಮಾಜ ರಕ್ಷಣಾ ಸೇನೆಯ ಹಾಸನ ಜಿಲ್ಲಾಧ್ಯಕ್ಷರಾಗಿ ಪ್ರೀತಂ ವಿ.ಹೆಚ್. ಆಯ್ಕೆ

ಹಾಸನ: ಸಮಾಜ ರಕ್ಷಣಾ ಸೇನೆ (ರಿ.) ಸಂಘಟನೆಯ ಹಾಸನ ಜಿಲ್ಲಾ ನೂತನ ಅಧ್ಯಕ್ಷರಾಗಿ ಪ್ರೀತಂ ವಿ.ಹೆಚ್. ಅವರನ್ನು ಆಯ್ಕೆ ಮಾಡಲಾಗಿದೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಹನುಮಂತರಾಜು ಕೆ.ಹೆಚ್. ಅವರು ಪ್ರೀತಂ ಅವರ ಸಂಘಟನಾ ಮನೋಭಾವ, ಸಾಮಾಜಿಕ ಕಾಳಜಿ ಹಾಗೂ ಕಾರ್ಯತತ್ಪರತೆಯನ್ನು ಪರಿಗಣಿಸಿ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದರು. ಇದೇ ಸಂದರ್ಭದಲ್ಲಿ ಸಂಘಟನೆಯ ವಿವಿಧ ಪದಾಧಿಕಾರಿಗಳನ್ನೂ ನೇಮಕ ಮಾಡಲಾಯಿತು.

ನೂತನ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಹಾಸನ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಸಮಾಜದ ರಕ್ಷಣೆ ಹಾಗೂ ಜನಪರ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ವಿಶ್ವಾಸವನ್ನು ಸಂಘಟನೆಯ ಪದಾಧಿಕಾರಿಗಳು ವ್ಯಕ್ತಪಡಿಸಿದರು.

ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಪ್ರೀತಂ ವಿ.ಹೆಚ್. ಮಾತನಾಡಿ, “ಸಂಘದ ನಿಯಮಾನುಸಾರವಾಗಿ ಎಲ್ಲಾ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಒಗ್ಗಟ್ಟಿನಿಂದ ಸಂಘಟನೆಯನ್ನು ಮುನ್ನಡೆಸುವುದರ ಜೊತೆಗೆ ಜಿಲ್ಲೆಯಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು” ಎಂದು ತಿಳಿಸಿದರು.

Related posts

ಜೀ ಟಿವಿಯಲ್ಲಿ ಕಾಗಿನೆರೆಯ ಅನುಷ್ಕಾ ಮುನ್ನಡೆ

Bimba Prakashana

ಚಂಗಡಹಳ್ಳಿ ಹೆಗ್ಗಡಹಳ್ಳಿಯಲ್ಲಿ ಜಾತ್ರಾ ಮಹೋತ್ಸವ

Bimba Prakashana

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More