🔴ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡದಿದ್ದರೆ ಹೋರಾಟದ ಎಚ್ಚರಿಕೆ
ಸಕಲೇಶಪುರ: ಸಕಲೇಶಪುರ ತಾಲ್ಲೂಕಿನ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಇಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸರಣಿ ಮನವಿಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಆಗ್ರಹಿಸಲಾಯಿತು.
🔴ದಸರಾ ಹಬ್ಬಕ್ಕೆ ರಜೆ ಘೋಷಿಸದ ಸಂತ ಜೋಸೆಫ್ ಶಾಲೆ ವಿರುದ್ಧ ಆಕ್ರೋಶ
ಸಕಲೇಶಪುರದ ಸಂತ ಜೋಸೆಫ್ ಶಾಲೆಯಲ್ಲಿ ನಾಡಹಬ್ಬ ದಸರಾಕ್ಕೆ ರಜೆ ಘೋಷಣೆ ಮಾಡದಿರುವುದನ್ನು ಹಿಂದೂ ಹಿತರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸಿದೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿ, ದಸರಾ ನಾಡಹಬ್ಬವಾಗಿರುವುದರಿಂದ ಶಾಲೆಗೆ ಕೂಡಲೇ ರಜೆ ಘೋಷಿಸುವಂತೆ ಒತ್ತಾಯಿಸಲಾಯಿತು. ಮಕ್ಕಳ ಹಾಗೂ ಪೋಷಕರ ಭಾವನೆಗಳಿಗೆ ಗೌರವ ನೀಡಿ, ಅಧಿಕಾರಿಗಳು ತಕ್ಷಣ ಸೂಕ್ತ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಲಾಯಿತು.
🔴ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಮುನ್ನವೇ ಕ್ರಮ ಕೈಗೊಳ್ಳಿ
ಸಕಲೇಶಪುರದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸಕಲೇಶಪುರದ ಹೆನ್ನಲಿ ಗ್ರಾಮದಲ್ಲಿ ಇರುವ ಚೆಕ್ -ಡ್ಯಾಮ್ ಬಾಗಿಲುಗಳನ್ನ ಸರಿಪಡಿಸಿ ಮುಚ್ಚುವ ಹಾಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮಾನ್ಯ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಳೆಯ ಕೊರತೆ ಹಾಗೂ ನೀರಿನ ಲಭ್ಯತೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಲಾಶಯದ ನೀರಿನ ನಿರ್ವಹಣೆ, ನೀರಿನ ಸಂಗ್ರಹಣೆ ಹಾಗೂ ಅಗತ್ಯ ಕ್ರಮಗಳ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ವೇದಿಕೆ ಎಚ್ಚರಿಸಿದೆ.
🔴ಹಿಂದೂ ರುದ್ರಭೂಮಿ ಜಾಗಕ್ಕೆ ಹದ್ದುಬಸ್ತು ಮಾಡಿ
ಸಕಲೇಶಪುರದ ಹಿಂದೂ ರುದ್ರಭೂಮಿಗೆ ಸಂಬಂಧಿಸಿದ ಜಮೀನನ್ನು ಸಂಪೂರ್ಣವಾಗಿ ಗುರುತಿಸಿ, ಸರ್ವೇ ನಡೆಸಿ ಹದ್ದುಬಸ್ತು ಮಾಡಿಕೊಡಬೇಕು ಎಂದು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ರುದ್ರಭೂಮಿಗೆ ಸೇರಿದ ಜಾಗದ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡು, ಯಾವುದೇ ರೀತಿಯ ಅತಿಕ್ರಮಣಕ್ಕೆ ಅವಕಾಶ ನೀಡಬಾರದು. ಹಿಂದೂ ರುದ್ರಭೂಮಿಯ ಜಾಗವನ್ನು ಅಧಿಕೃತವಾಗಿ ಗುರುತಿಸಿ, ಶಾಶ್ವತ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ಆಗ್ರಹಿಸಿದೆ.
‘🔴ತಪೋವನ’ ರೆಸಾರ್ಟ್ ವಿರುದ್ಧ ಕ್ರಮಕ್ಕೆ ಆಗ್ರಹ
ಸಕಲೇಶಪುರದಲ್ಲಿ ‘ತಪೋವನ’ ಹೆಸರಿನಲ್ಲಿ ನಡೆಯುತ್ತಿರುವ ರೆಸಾರ್ಟ್‌ನ ಕುರಿತು ಪರಿಶೀಲನೆ ನಡೆಸಿ, ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಹಿತರಕ್ಷಣಾ ವೇದಿಕೆ ಒತ್ತಾಯಿಸಿದೆ.
ರೆಸಾರ್ಟ್‌ಗೆ ನೀಡಿರುವ ವಿವಿಧ ಅನುಮತಿಗಳು ಹಾಗೂ ಅಬಕಾರಿ ಪರವಾನಗಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು. ನಿಯಮಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಅಬಕಾರಿ ಪರವಾನಗಿಯನ್ನು ರದ್ದುಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಸಾರ್ವಜನಿಕ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದಲ್ಲಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸಲಾಗುವುದು ಎಂದು ಹಿಂದೂ ಹಿತರಕ್ಷಣಾ ವೇದಿಕೆ ಸ್ಪಷ್ಟ ಎಚ್ಚರಿಕೆ ನೀಡಿದೇ
ಈ ಸಂದರ್ಭದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ಕೌಶಿಕ್ ಹೆನ್ನಲಿ, ದುಷ್ಯಂತ್ ಗೌಡ, ತಾಲ್ಲೂಕು ಸಂಚಾಲಕ ಶಿವೂ ಜಿಪ್ಪಿ, ಶೇಖರ್ ಪೂಜಾರಿ,ಯೋಗೇಶ್ ಕಬ್ಬಿನಗದ್ದೆ, ಹರೀಶ್, ಸುಪ್ರೀತ್ ಆಟೋ, ಪ್ರದೀಪ್ ಪೂಜಾರಿ, ಹರ್ಷ ಕೆಳಗಳಲೆ ಭಾಗವಹಿಸಿದ್ದರು.




