🔴ಆಲೂರು ತಾಲೂಕಿನ ತಾಲೂಕು ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು : ಹೆಚ್.ಕೆ.ಕುಮಾರಸ್ವಾಮಿ
ಆಲೂರು : ಹಿಂದಿನ ಸೋಲಿನಿಂದ ಪಾಠ ಕಲಿತು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಮೂಲಕ ಜಿ.ಪಂ., ತಾ.ಪಂ. ಸಂಸ್ಥೆಗಳ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಆಲೂರು ತಾಲೂಕಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವಾದ ಪ್ರಮಾದಗಳು ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮರುಕಳಿಸಬಾರದು. ಕ್ಷೇತ್ರದಲ್ಲಿರುವ ಪ್ರತಿಯೊಬ್ಬ ಮತದಾರರ ವಿಶ್ವಾಸವನ್ನು ಗಳಿಸುವ ಮೂಲಕ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಮನವಿ ಮಾಡಿದರು.
ನಂತರ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚಂಚಲ ಕುಮಾರಸ್ವಾಮಿ ಇಂದು ನಮ್ಮ ಕಾರ್ಯಕರ್ತರ ಸಭೆಗೆ ದುಬೈಯಿಂದ ಯುವಕರಾದ ಯತೀಶ್ ಆಗಮಿಸಿ ನಮ್ಮ ಪಕ್ಷಕ್ಕೆ ಬಲ ತಂದಿದ್ದಾರೆ ಅವರಿಗೆ ನಮ್ಮ ಜೆಡಿಎಸ್ ಪಕ್ಷದ ಪರವಾಗಿ ತುಂಬು ಹೃದಯದ ಧನ್ಯವಾದಗಳು ಎಂದು ಮಾತನಾಡಿದಲ್ಲದೆ
ಯುವಕರಿಗೆ ಪಕ್ಷದ ಸಂಘಟನೆಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ಅಗತ್ಯವಿದೆ. ಬೂತ್, ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿ, ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುವುದು. ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಲು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.”
ನಂತರ ಮಾತನಾಡಿದ ಜೆಡಿಎಸ್ ಪಕ್ಷದ ಯುವ ಘಟಕದ ಮಾಜಿ ಅಧ್ಯಕ್ಷರಾದ ಸುದರ್ಶನ್ ನಾವು ಪಕ್ಷಕ್ಕೆ ರೂ.25 ವರ್ಷಗಳಿಂದ ದುಡಿದಿದ್ದೇವೆ ಆದರೆ ಇಂದು ಜೆಡಿಎಸ್ ಪಕ್ಷದ ವರಿಷ್ಠರು ನಮಗೆ ಹೇಳದೆ ಕೇಳದೆ ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷರಾಗಿ ಗುರು ಅವರನ್ನು ಮಾಡಿರುವುದು ಎಷ್ಟು ಸರಿ ನಾವು ಕೂಡ ಪಕ್ಷಕ್ಕೆ ಕಷ್ಟಪಟ್ಟು ಪಕ್ಷವನ್ನು ಕಟ್ಟಿದ್ದೇವೆ ಮೂರು ಬಾರಿ ಜೆಡಿಎಸ್ ಶಾಸಕರನ್ನು ಆಯ್ಕೆ ಮಾಡಲು ಹಗಲಿರಲು ಶ್ರಮಿಸಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿಷ್ಠಾವಂತ ಕಾರ್ಯಕರ್ತರಿಗೆ ಜವಾಬ್ದಾರಿಗಳನ್ನು ಕೊಡಲು ಬಿಟ್ಟು ಈ ದಿನ ಕೂಡ ಅವರು ಬಂದಿಲ್ಲ ಅವರಿಗೆ ಯುವ ಘಟಕದ ಅಧ್ಯಕ್ಷರನ್ನು ಕೊಟ್ಟಿರುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಲ್ಲದೆ ನಿಷ್ಠಾವಂತ ಕಾರ್ಯಕರ್ತರ ಗಳಿಗೆ ಮುಖಂಡರುಗಳಿಗೆ ಟಿಕೆಟ್ ನೀಡಬೇಕೆಂದು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಅಧ್ಯಕ್ಷ ನಟರಾಜ್, ತಾಲೂಕು ಅಧ್ಯಕ್ಷ
ಐ ಸ್ವಾಮಿಗೌಡ, ಆಲೂರು ಜೆಡಿಎಸ್ ಅಧ್ಯಕ್ಷರಾದ ಕಂದಳ್ಳಿ ಮಂಜೇಗೌಡ. ತಾಲೂಕು ಪಂಚಾಯಿತಿ ಮಾಜಿ ಸದಸ್ಯರುಗಳಾದ ನಟರಾಜ್ ನಾಗಲಗೋಡು. ದೊರೆ ಜೈಪಾಲ್. ಬಂಡೆ ಕಾಂತರಾಜ್ ಪಕ್ಷದ ಮುಖಂಡರುಗಳಾದ ಸಿಡಿ ಅಶೋಕ್. ತನು ಗೌಡ. ಧರ್ಮರಾಜು. ಯೋಗೇಶ್. ದುಬೈ ಯತೀಶ್. ರಾಜಪ್ಪ ಗೌಡ ಕದಾಳ್ ಪ್ರವೀಣ್. ಪಾಳ್ಯ
ಲಿಂಗರಾಜು ಮೂರ್ತಿ. ಪ್ರಕಾಶ್. ಕಾಂತರಾಜು. ಹರೀಶ್ ಬಸವರಾಜು.ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
previous post
