ಆಲೂರು.ತಾಲೂಕಿನ ಪಾಳ್ಯ ಹೋಬಳಿಯ ನಿಡನೂರು. ವಿದ್ಯಾ ನಗರ. ಬುಧನಲ್ಲಿ ಹಾಗೂ ಬಸವನಲ್ಲಿ ಗ್ರಾಮಕ್ಕೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಗುಣಮಟ್ಟದ ರಸ್ತೆ ಅತ್ಯಗತ್ಯವಾಗಿದ್ದು,ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲ್ಲೂಕಿನ ಪಾಳ್ಯ ಹೋಬಳಿಯ ಗ್ರಾಮಗಳಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಾಗಿದ್ದ ರಸ್ತೆಗೆ ಇಂದು 70 ಲಕ್ಷ ರೂ,ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,ಕ್ಷೇತ್ರದ ಸಮಗ್ರ ಅಭಿವೃದ್ಧಿ ಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು,ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯಕ್ಕೆ ಅವಕಾಶ ವಿಲ್ಲ,ಜನರ ಹಿತವೇ ತಮ್ಮ ರಾಜಕೀಯವಾಗಿದ್ದು, ಜನರ ಅಗತ್ಯಗಳಿಗೆ ಸ್ಪಂದಿಸಿ ಗುಣಮಟ್ಟದ ಮೂಲ ಸೌಕರ್ಯ ಕಲ್ಪಿಸುವುದು ನಮ್ಮ ಧ್ಯೇಯ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಪ್ರಶ್ನೆಯಿಲ್ಲ ಎಂದು ಹೇಳಿದರು.
ಅಭಿವೃದ್ಧಿ ಕಾಮಗಾರಿಗಳು ಯಾವುದೇ ಪಕ್ಷ ಅಥವಾ ವ್ಯಕ್ತಿಗೆ ಸೀಮಿತವಾಗಿಲ್ಲ, ಕ್ಷೇತ್ರದ ಪ್ರತಿಯೊಬ್ಬ ನಾಗರಿಕರ ಹಿತದೃಷ್ಟಿಯಿಂದ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು, ಮುಂದೆಯೂ ಜನರ ವಿಶ್ವಾಸಕ್ಕೆ ತಕ್ಕಂತೆ ಗುಣಮಟ್ಟದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ ಮಾತನಾಡಿದಲ್ಲದೆ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರ ಅಗತ್ಯ ಅನುದಾನ ನೀಡುತಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು.ರಸ್ತೆ ಅಗತ್ಯವಿರುವ ಸ್ಥಳಗಳಲ್ಲಿ ಗ್ರಾಮಸ್ಥರು ಸಹಕಾರ ನೀಡಿ ಜಾಗ ಬಿಟ್ಟುಕೊಟ್ಟರೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮನವಿ ಮಾಡಿದರು.
ಚರಂಡಿ,ರಸ್ತೆ,ದೇವಸ್ಥಾನ, ಸಬ್ ಸ್ಟೇಷನ್.ಹೀಗೆ ಇನ್ನೂ ಹಲವಾರು ಕಾಮಗಾರಿಗಳಿಗೆ ಹಣವನ್ನು ಇಟ್ಟಿದ್ದು ಮುಂದಿನ ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುತ್ತೇವೆಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಆಲೂರು ಕಟ್ಟಾಯಮಂಡಲದ ಪ್ರಧಾನ ಕಾರ್ಯದರ್ಶಿ ಕೃಷ್ಣ ಅಬ್ಬನ. ಮುಖಂಡರುಗಳಾದ ಹನುಮಂತೇಗೌಡ. ಬರನ್. ದೇವರಾಜು. ರಂಗೇಗೌಡ. ಅಣ್ಣೇಗೌಡ. ನಾಗೇಂದ್ರ ಆಚಾರ್. ದಿನೇಶ್.ಗುತ್ತಿಗೆದಾರರಾದ ಆರ್ಯನ್. ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
previous post
