🔴ಕೈಕೊಟ್ಟ ಮುಂಗಾರು; ರಾಗಿ ಬೆಳೆ ತೀವ್ರ ಕುಂಠಿತ-ಉತ್ಪಾದನೆ ಕುಸಿಯುವ ಆತಂಕ
ವರದಿ: ನವೀನ್ ಬೈರಾಪುರ
ಆಲೂರು : ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬೇಲೂರು ತಾಲ್ಲೂಕಿನಲ್ಲಿ ರಾಗಿ ಬಿತ್ತನೆ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಬಿತ್ತನೆಯಾದ ಬೆಳೆಗಳೂ ಸಮರ್ಪಕ ತೇವಾಂಶವಿಲ್ಲದೆ ಒಣಗುವ ಸ್ಥಿತಿಗೆ ತಲುಪಿವೆ. ಇದರಿಂದ ರಾಗಿ ಬೆಳೆ ನಂಬಿಕೊಂಡಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂಗಾರು ಮಳೆಯಾದರೂ ಉತ್ತಮವಾಗಿ ಸುರಿದು ಕೈಹಿಡಿಯಬಹುದೇ ಎಂಬ ನಿರೀಕ್ಷೆಯಲ್ಲಿ ರೈತರು ಆಕಾಶದತ್ತ ಮುಖಮಾಡಿದ್ದಾರೆ.
ತಾಲ್ಲೂಕಿನಪಾಳ್ಯ ಬೈರಾಪುರ ಮಾದೀಹಳ್ಳಿ ಹಾಗೂ ಕಸಬ ಹೋಬಳಿಗಳಲ್ಲಿ ಹೆಚ್ಚಿನ ರೈತರು ಮಳೆಯನ್ನೇ ಅವಲಂಬಿಸಿ ರಾಗಿ ಬೆಳೆಯುತ್ತಾರೆ. ಆದರೆ ಈ ಬಾರಿ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಸಕಾಲದಲ್ಲಿ ಬಿತ್ತನೆ ಮಾಡಲು ಸಾಧ್ಯವಾಗದಿರುವುದು ಒಂದೆಡೆಯಾದರೆ, ಈಗಾಗಲೇ ಬಿತ್ತನೆ ಮಾಡಿರುವ ಪ್ರದೇಶಗಳಲ್ಲಿಯೂ ತೇವಾಂಶದ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ. ಇದರಿಂದ ರೈತರ ನಿರೀಕ್ಷೆಗಳು ಹುಸಿಯಾಗುವ ಆತಂಕ ಎದುರಾಗಿದೆ. ಬೇಲೂರು ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 4,458 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ಮಾಡುವ ಗುರಿ ನಿಗದಿಪಡಿಸಲಾಗಿತ್ತು. ಆದರೆ ಮಳೆಯ ಕೊರತೆಯಿಂದಾಗಿ ಕೇವಲ 1,285 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಬಿತ್ತನೆಯಾದ ಪ್ರದೇಶಗಳಲ್ಲಿಯೂ ಸಾಕಷ್ಟು ಮಳೆಯಾಗದ ಕಾರಣ ಬೆಳೆಗಳು ಸಮರ್ಪಕವಾಗಿ ಬೆಳೆಯದೆ ನೆಲಕಚ್ಚುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ಹಿಂಗಾರು ಹಂಗಾಮಿನಲ್ಲಿ 700 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದ್ದು, ಈವರೆಗೆ 165 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಇತ್ತೀಚಿನ ಹಿಂಗಾರು
ಮಳೆ ರೈತರಲ್ಲಿ ಕೊಂಚ ಆಶಾಭಾವನೆ ಮೂಡಿಸಿದ್ದರೂ, ನಿರಂತರವಾಗಿ ಉತ್ತಮ ಮಳೆಯಾದರೆ ಮಾತ್ರ ಬೆಳೆ ಉಳಿಸಿಕೊಳ್ಳಲು ಸಾಧ್ಯ ಎಂಬುದು ರೈತರ ಅಭಿಪ್ರಾಯವಾಗಿದೆ.
ಹಿಂಗಾರು ಹಂಗಾಮಿನಲ್ಲಿ ಮಳೆಯ ಪ್ರಮಾಣ ಮತ್ತು ಹಂಚಿಕೆ ಸಮರ್ಪಕವಾಗಿದ್ದರೆ ಅಲ್ಪ ಪ್ರಮಾಣದಲ್ಲಾದರೂ ಬೆಳೆ ಪಡೆಯಬಹುದು ಎಂಬ ನಿರೀಕ್ಷೆ ರೈತರಲ್ಲಿದೆ. ಆದರೆ ಮಳೆ ಮತ್ತೆ ಕೈಕೊಟ್ಟರೆ ಬಿತ್ತನೆಗೆ ಮಾಡಿರುವ ವೆಚ್ಚವೂ ಕೈಗೆ ಸಿಗದ ಪರಿಸ್ಥಿತಿ ಎದುರಾಗಬಹುದು ಎಂಬ ಆತಂಕ ಅವರನ್ನು ಕಾಡುತ್ತಿದೆ.
ಒಂದು ಕಾಲದಲ್ಲಿ ಸಾಮಾನ್ಯ ಆಹಾರಧಾನ್ಯವೆಂದು ಪರಿಗಣಿಸಲಾಗುತ್ತಿದ್ದ ರಾಗಿ, ಇಂದು ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ
2060 ರೈತರು ರಾಗಿ ಬೆಳೆ ವಿಮೆ ಮಾಡಿಸಿದ
ಆಲೂರು ತಾಲ್ಲೂಕಿನಲ್ಲಿ ಈಗಾಗಲೇ 2,650 ರೈತರು ಒಟ್ಟು 1,040 ಹೆಕ್ಟೇರ್ ಪ್ರದೇಶದ ರಾಗಿ ಬೆಳೆಗೆ ವಿಮೆ ಮಾಡಿಸಿದ್ದಾರೆ. ಮಳೆ ಕೊರತೆಯಿಂದ ಬೆಳೆ ಹಾನಿಯ ಆತಂಕ ಎದುರಾಗಿರುವ ಹಿನ್ನೆಲೆಯ ಲ್ಲಿ ಬೆಳೆ ವಿಮೆ ರೈತರಿಗೆ ನೆರವಾಗುವ ನಿರೀಕ್ಷೆಯಿದೆ. ಹಿಂಗಾರು ಮಳೆಯಲ್ಲಿ ಸ್ವಲ್ಪಮಟ್ಟಿನ ಚೇತರಿಕೆ ಕಂಡುಬಂದಿದ್ದರೂ, ಕಳೆದ ಸಾಲಿಗೆ ಹೋಲಿಸಿದರೆ ಶೇ 24ರಷ್ಟು ಮಳೆ ಕೊರತೆಯಿದೆ ಎಂದುಆಲೂರು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಮನು ತಿಳಿಸಿದ್ದಾರೆ.
ಮಹತ್ವ ಪಡೆದಿದೆ. ನಾರಿನಾಂಶ, ಕ್ಯಾಲ್ಸಿಯಂ ಸೇರಿದಂತೆ ಹಲವು ಪೋಷಕಾಂಶಗಳನ್ನು ಹೊಂದಿರುವ ರಾಗಿ, ಗ್ರಾಮೀಣ ಭಾಗದ ಜನರ ದೈನಂದಿನ ಆಹಾರದ ಪ್ರಮುಖ ಭಾಗವಾಗಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರು ಸೇರಿದಂತೆ ನಗರ ಪ್ರದೇಶಗಳಲ್ಲಿಯೂ ರಾಗಿ ಬಳಕೆ ಹೆಚ್ಚುತ್ತಿದೆ.
ಆದರೆ ರಾಗಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಮಳೆ ಕೊರತೆಯಿಂದ ಉತ್ಪಾದನೆ ಕುಸಿಯುವ ಸಾಧ್ಯತೆ ಎದುರಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ರಾಗಿ ಲಭ್ಯತೆ ಕಡಿಮೆಯಾಗುವುದರ ಜತೆಗೆ ಬೆಲೆ ಏರಿಕೆಯ ಆತಂಕವೂ ಉಂಟಾಗಿದೆ. ಉತ್ಪಾದನೆ ಕುಸಿತವು ರೈತರ ಆದಾಯದ ಮೇಲೆ ಪರಿಣಾಮ
ಬೀರುವುದಷ್ಟೇ ಅಲ್ಲದೆ, ರಾಗಿಯನ್ನು ನಿತ್ಯದ ಆಹಾರವಾಗಿ ಬಳಸುವ ಸಾಮಾನ್ಯ ಕುಟುಂಬಗಳಿಗೂ ಹೊರೆಯಾಗುವ ಸಾಧ್ಯತೆಯಿದೆ.
ರಾಗಿ ಕೇವಲ ವಾಣಿಜ್ಯ ಬೆಳೆಯಲ್ಲ; ಗ್ರಾಮೀಣ ಭಾಗದ ಅನೇಕ ಕುಟುಂಬಗಳ ಆಹಾರ ಭದ್ರತೆಯೊಂದಿಗೂ ಬೆಸೆದುಕೊಂಡಿದೆ. ಹೀಗಾಗಿ ಬೆಳೆ ನಷ್ಟವು ರೈತರ ಆರ್ಥಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಈಗಾಗಲೇ ಬಿತ್ತನೆಗೆ ಬೀಜ, ಗೊಬ್ಬರ, ಉಳುಮೆ ಹಾಗೂ ಇತರ ಕೃಷಿ ಚಟುವಟಿಕೆಗಳಿಗೆ ಹಣ ವ್ಯಯಿಸಿರುವ ರೈತರು, ನಿರೀಕ್ಷಿತ ಇಳುವರಿ ದೊರೆಯದಿದ್ದರೆ ಸಾಲದ ಹೊರೆ ಹೆಚ್ಚಾಗುವ ಆತಂಕದಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯು ಮಳೆ ಕೊರತೆಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು. ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ಅರ್ಹ ರೈತರಿಗೆ ಸರ್ಕಾರದ ನಿಯಮಾನುಸಾರ ಬೆಳೆ ನಷ್ಟ ಪರಿಹಾರ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಬೇಕು ಎಂಬುದು ರೈತರ ಒತ್ತಾಯವಾಗಿದೆ. ಹಿಂಗಾರು ಮಳೆ ಉತ್ತಮವಾಗಿ ಸುರಿದು ರಾಗಿ ಬೆಳೆ ಉಳಿಯುವುದೇ ಎಂಬುದನ್ನು ರೈತರು ಎದುರು ನೋಡುತ್ತಿದ್ದಾರೆ.
ಕೃಷಿ ಇಲಾಖೆಯ ಸಹಾಯಕ ಮನು ಅವರ ಪ್ರಕಾರ, ಬೇಲೂರು ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 4,458 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ಮಾಡುವ ಗುರಿ ಹೊಂದಲಾಗಿತ್ತು. ಆದರೆ ಮಳೆ ಕೊರತೆಯಿಂದಾಗಿ 1,285 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಹಿಂಗಾರು ಹಂಗಾಮಿನಲ್ಲಿ 700 ಹೆಕ್ಟೇರ್ ಗುರಿಗೆ ಪ್ರತಿಯಾಗಿ ಈವರೆಗೆ 165 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹಿಂಗಾರು ಮಳೆ ರೈತರಲ್ಲಿ ಸ್ವಲ್ಪಮಟ್ಟಿನ ಆತ್ಮವಿಶ್ವಾಸ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಮಳೆ ಅನುಕೂಲಕರವಾಗಿದ್ದರೆ ಅಲ್ಪ ಪ್ರಮಾಣದ ಬೆಳೆ ದೊರೆಯುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
previous post
